ಸಾಂದರ್ಭಿಕ ಚಿತ್ರ
ಬೆಂಗಳೂರು: ಕೃತಕ ಬಣ್ಣ ಪತ್ತೆಗೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಔಷಧ ಗುಣಮಟ್ಟ ಇಲಾಖೆ ಅಧಿಕಾರಿಗಳು ಕರಿದ ಹಸಿರು ಬಟಾಣಿಗಳ 96 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದು, ಅವುಗಳಲ್ಲಿ 64 ಮಾದರಿಗಳು ಅಸುರಕ್ಷಿತ ಎನ್ನುವುದು ದೃಢಪಟ್ಟಿದೆ.
ಈವರೆಗೆ ಕರಿದ ಹಸಿರು ಬಟಾಣಿಗಳ 114 ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅವುಗಳಲ್ಲಿ 96 ಮಾದರಿಗಳ ವಿಶ್ಲೇಷಣೆ ಪೂರ್ಣಗೊಂಡಿದೆ. ಉಳಿದ ಮಾದರಿಗಳ ವಿಶ್ಲೇಷಣಾ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಯೋಗಾಲಯದ ವರದಿಗಳ ಆಧಾರ ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.