ADVERTISEMENT

ಕಲಾಗ್ರಾಮದಲ್ಲಿ ಸುಗ್ಗಿ ಹುಗ್ಗಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 22:11 IST
Last Updated 20 ಜನವರಿ 2020, 22:11 IST
ಎಸ್.ರಂಗಪ್ಪ, ಆರ್.ಆರ್. ಜನ್ನು ಅವರು ರಾಶಿ ಪೂಜೆ ನೆರವೇರಿಸುವ ಮೂಲಕ ಸುಗ್ಗಿ ಹುಗ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿ.ಬಸವಲಿಂಗಯ್ಯ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಎಂ.ಎ.ಹೆಗಡೆ, ರಂಗಕರ್ಮಿ ಕೆ.ವಿ.ನಾಗರಾಜ ಮೂರ್ತಿ ಇದ್ದಾರೆ
ಎಸ್.ರಂಗಪ್ಪ, ಆರ್.ಆರ್. ಜನ್ನು ಅವರು ರಾಶಿ ಪೂಜೆ ನೆರವೇರಿಸುವ ಮೂಲಕ ಸುಗ್ಗಿ ಹುಗ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿ.ಬಸವಲಿಂಗಯ್ಯ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಎಂ.ಎ.ಹೆಗಡೆ, ರಂಗಕರ್ಮಿ ಕೆ.ವಿ.ನಾಗರಾಜ ಮೂರ್ತಿ ಇದ್ದಾರೆ   

ಕೆಂಗೇರಿ: ಕನ್ನಡದ ಸದಭಿರುಚಿಯ ನಾಟಕ ಹಾಗೂ ಕಾವ್ಯಗಳನ್ನು ದೃಶ್ಯ ರೂಪದಲ್ಲಿ ಕಟ್ಟಿಕೊಡುವ ಕಾಯಕಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣ ಸಹಕಾರವಿರುತ್ತದೆ ಎಂದು ಇಲಾಖೆಯ ಕಾರ್ಯದರ್ಶಿ ಆರ್.ಆರ್. ಜನ್ನು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಸುಗ್ಗಿ ಹುಗ್ಗಿ ಕಾರ್ಯಕ್ರಮಕ್ಕೆ ರಾಶಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಭಾಷೆ ಹಾಗೂ ಸಂಸ್ಕೃತಿಯ ಬೆಳವಣಿಗೆಯಲ್ಲಿ ಕಲಾವಿದರ ಕೊಡುಗೆ ಅನನ್ಯ. ಕಲೆಯ ಮೂಲಕ ಕನ್ನಡದ ಜೊತೆಗೆ ಸ್ಥಳೀಯ ಅಸ್ಮಿತೆಯನ್ನು ಪೋಷಿಸಿಕೊಂಡು ಬರುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ, ‘ಕಲಾಗ್ರಾಮದ ಸುವರ್ಣ ಸಮುಚ್ಚಯದ ಕಟ್ಟಡ ನವೀಕರಣ ಕಾಮಗಾರಿ ಒಂದು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ. ಕಲಾಗ್ರಾಮ ಆವರಣದಲ್ಲಿ 365 ದಿನವೂ ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ಸಾಗುವಂತೆ ಮಾಡಲು ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಲಾಗಿದೆ’ ಎಂದರು.

ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ಸಿ. ಬಸವಲಿಂಗಯ್ಯ, ‘ಮಲೆಗಳಲ್ಲಿ ಮದುಮಗಳು ನಾಟಕ ಪ್ರದರ್ಶನದ ನಂತರ ಆ ಕಾದಂಬರಿಯ ಸುಮಾರು 20 ಸಾವಿರ ಪ್ರತಿಗಳು ಮಾರಾಟವಾಗಿದ್ದು, ನಾಟಕ ಪ್ರದರ್ಶನದ ಹಿರಿಮೆಯನ್ನು ಹೆಚ್ಚಿಸಿದೆ’ ಎಂದರು. ಇದೇ ವೇಳೆ ‘ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.