ADVERTISEMENT

ದೃಢ ಸಂಕಲ್ಪ, ಸರಳತೆ ಯಶಸ್ಸಿನ ಸೂತ್ರ: ನಿರ್ಮಲಾನಂದನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2023, 20:45 IST
Last Updated 23 ನವೆಂಬರ್ 2023, 20:45 IST
ಬಿಜಿಎಸ್ ಮತ್ತು ಎಸ್‌ಜೆಬಿ  ಸಂಸ್ಥೆಯ ಪ್ರಾಧ್ಯಾಪಕ ಡಾ.ಶಾಂತಕುಮಾರ್ ಹಾಗೂ ಸವಿತಾ ಸುವರ್ಣ ಅವರಿಗೆ ‘ಸೇವಾರತ್ನ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ, ನಟ ಯಶ್, ಶಾಸಕ ಎಸ್.ಟಿ.ಸೋಮಶೇಖರ್ ಇದ್ದಾರೆ
ಬಿಜಿಎಸ್ ಮತ್ತು ಎಸ್‌ಜೆಬಿ  ಸಂಸ್ಥೆಯ ಪ್ರಾಧ್ಯಾಪಕ ಡಾ.ಶಾಂತಕುಮಾರ್ ಹಾಗೂ ಸವಿತಾ ಸುವರ್ಣ ಅವರಿಗೆ ‘ಸೇವಾರತ್ನ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ, ನಟ ಯಶ್, ಶಾಸಕ ಎಸ್.ಟಿ.ಸೋಮಶೇಖರ್ ಇದ್ದಾರೆ   

ಕೆಂಗೇರಿ: ‘ದೃಢ ಸಂಕಲ್ಪ ಹಾಗೂ ಶ್ರಮದೊಂದಿಗೆ ಸರಳತೆ, ಸಜ್ಜನಿಕೆ ಮೈಗೂಡಿಸಿಕೊಂಡರೆ ಯಶಸ್ಸು ನಮ್ಮದಾಗುತ್ತದೆ’ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಬಿಜಿಎಸ್ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣಕ್ಕೆ ನೀಡುವ ಮಹತ್ವ ಕ್ರೀಡೆಗೂ ದೊರೆಯಬೇಕು. ಕ್ರೀಡೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಸುವುದರೊಂದಿಗೆ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಗೋವಿಂದರಾಜು ಹೇಳಿದರು.

ADVERTISEMENT

ಚಿತ್ರನಟ ಯಶ್ ಮಾತನಾಡಿ, ‘ಒಬ್ಬ ವ್ಯಕ್ತಿಯ ಅವಿರತ ಶ್ರಮ, ಬದ್ಧತೆಯಿಂದ ಒಂದು ಉತ್ತಮ ಸಂಸ್ಥೆ ರೂಪುಗೊಳ್ಳಲು ಸಾಧ್ಯ. ಅದೇ ರೀತಿ ಬಾಲಗಂಗಾಧರ ಸ್ವಾಮೀಜಿ ಅವರ ಅವಿರತ ಪ್ರಯತ್ನದಿಂದ ಬಿಜಿಎಸ್ ದೇಶದ ಉನ್ನತ ಶಿಕ್ಷಣ ಸಂಸ್ಥೆಯಾಗಿ ರೂಪುಗೊಂಡಿದೆ’ ಎಂದು ಶ್ಲಾಘಿಸಿದರು. 

ಬಿಜಿಎಸ್ ಸಂಸ್ಥೆಯ ಸಾಧಕ ಪ್ರಾಧ್ಯಾಪಕರಾದ ಸವಿತಾ ಸುವರ್ಣ ಹಾಗೂ ಶಾಂತಕುಮಾರ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಿಎಸ್ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ, ಶಾಸಕ ಎಸ್.ಟಿ.ಸೋಮಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.