ADVERTISEMENT

KIAL ವಿಮಾನ ನಿಲ್ದಾಣ ಮುಖ್ಯ ರಸ್ತೆಯಲ್ಲಿ ಕ್ಯಾಬ್‌ ಚಾಲಕ, ಬೈಕ್‌ ಸವಾರ ಗಲಾಟೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 20:12 IST
Last Updated 4 ಜನವರಿ 2026, 20:12 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಕ್ಯಾಬ್‌ ಹಾಗೂ ಬೈಕ್‌ ಚಾಲಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ಸಂಬಂಧದ ರಸ್ತೆ ರಂಪಾಟದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಮಾನ ನಿಲ್ದಾಣ ಪ್ರವೇಶಕ್ಕೂ ಮುನ್ನ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌) ನಾಕಾ ಚೆಕ್‌ಪೋಸ್ಟ್‌ ಸಮೀಪ ಶನಿವಾರ ತಡರಾತ್ರಿ (ಜ.3) ಈ ಘಟನೆ ನಡೆದಿದೆ ಎನ್ನಲಾಗಿದೆ. 

ADVERTISEMENT

ಕ್ಯಾಬ್‌ ಹಿಂಬಾಲಿಸಿಕೊಂಡು ಬಂದ ಬೈಕ್‌ ಸವಾರ ಕಾರನ್ನು ಅಡ್ಡಗಟ್ಟಿ ಚಾಲಕನೊಂದಿಗೆ ಗಲಾಟೆ ಮಾಡಿ, ಹಲ್ಲೆ ನಡೆಸುವ ದೃಶ್ಯ ವಿಡಿಯೊದಲ್ಲಿದೆ. ಇದರಿಂದ ಭಯಭೀತಗೊಂಡ ಕ್ಯಾಬ್‌ನಲ್ಲಿದ್ದ ಮಹಿಳೆ ಚಲಿಸುತ್ತಿರುವ ವಾಹನದಿಂದ ಕೆಳಗೆ ಇಳಿದರು.

ಘಟನೆಯನ್ನು ಗಮನಿಸಿದ ಸಿಐಎಸ್‌ಎಫ್‌ ಸಿಬ್ಬಂದಿ ಇಬ್ಬರನ್ನೂ ತಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಕ್ಯಾಬ್‌ನಲ್ಲಿದ್ದ ಮಹಿಳೆ ಮತ್ತು ಬೈಕ್‌ ಸವಾರ ಇಬ್ಬರು ಪ್ರೇಮಿಗಳು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.