ADVERTISEMENT

ದೇವಾಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಲು ಪೋಷಕರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 20:02 IST
Last Updated 8 ಸೆಪ್ಟೆಂಬರ್ 2019, 20:02 IST
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ವೀರೇಶಾನಂದ ಸರಸ್ವತೀ ಸ್ವಾಮೀಜಿ, ಸೂರ್ಯನಾರಾಯಣ, ಎಂ.ಡಿ.ಲಕ್ಷ್ಮಿನಾರಾಯಣ, ಕೆ.ಆರ್.ಶ್ರೀನಿವಾಸ್ ಹಾಗೂ ಸಂಘದ ಸದಸ್ಯರು ಇದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ವೀರೇಶಾನಂದ ಸರಸ್ವತೀ ಸ್ವಾಮೀಜಿ, ಸೂರ್ಯನಾರಾಯಣ, ಎಂ.ಡಿ.ಲಕ್ಷ್ಮಿನಾರಾಯಣ, ಕೆ.ಆರ್.ಶ್ರೀನಿವಾಸ್ ಹಾಗೂ ಸಂಘದ ಸದಸ್ಯರು ಇದ್ದರು.   

ಬೆಂಗಳೂರು: ‘ಸಮಾಜದಲ್ಲಿ ಇತಿಹಾಸವನ್ನು ತಿಳಿದುಕೊಳ್ಳುವವರಿಗಿಂತಲೂ ಇತಿಹಾಸ ನಿರ್ಮಿಸುವವರ ಅಗತ್ಯವಿದೆ’ ಎಂದುತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.

ದೇವಾಂಗ ಸಂಘ ಹಾಗೂ ಕರ್ನಾಟಕ ರಾಜ್ಯ ದೇವಾಂಗ ನೌಕರರ ಸಂಘದ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದ ಪ್ರಗತಿ ಶೈಕ್ಷಣಿಕ ಪ್ರಗತಿಯನ್ನು ಅವಲಂಬಿಸಿದೆ. ಸರಿಯಾದ ಗುರು ಸಿಕ್ಕರೆ ಘನತೆ ಹೆಚ್ಚಿ ಸುವ ಶಿಷ್ಯರು ರೂಪುಗೊಳ್ಳುತ್ತಾರೆ.ಈ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿ ವಿದ್ಯಾರ್ಥಿಯೂ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು’ ಎಂದರು. ರಾಜ್ಯ ನೇಕಾರ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ,‘ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಮಸ್ಯೆ ಇದ್ದವರು ಸಂಘದಿಂದ ನೆರವು ಪಡೆಯಬಹುದು’ ಎಂದರು.

ADVERTISEMENT

ದೇವಾಂಗ ಸಂಘದ ಅಧ್ಯಕ್ಷ ಸೂರ್ಯನಾರಾಯಣ, ‘ಐಎಎಸ್, ಐಪಿಎಸ್ ಮತ್ತು ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆಸಕ್ತಿ ಹೊಂದಿರುವ ಸಮುದಾಯದ ವಿದ್ಯಾರ್ಥಿಗಳನ್ನು ಸಂಘ ದತ್ತು ಪಡೆಯಲಿದೆ’ ಎಂದರು. 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.