ADVERTISEMENT

ಕುಂಬಳಗೋಡು ಗ್ರಾ.ಪಂ. ಅಧ್ಯಕ್ಷರಾಗಿ ದೇವರಾಜ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 18:05 IST
Last Updated 25 ಜುಲೈ 2024, 18:05 IST
ಕುಂಬಳಗೂಡು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ದೇವರಾಜ್ ಅವರನ್ನು ಶಾಸಕ ಎಸ್.ಟಿ. ಸೋಮಶೇಖರ್ ಅಭಿನಂದಿಸಿದರು. ಮುಖಂಡರಾದ ಚಿಕ್ಕರಾಜು, ನರಸಿಂಹಮೂರ್ತಿ, ಗೋಪಾಲಕೃಷ್ಣ, ರಾಮಕೃಷ್ಣ ಉಪಸ್ಥಿತರಿದ್ದರು
ಕುಂಬಳಗೂಡು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ದೇವರಾಜ್ ಅವರನ್ನು ಶಾಸಕ ಎಸ್.ಟಿ. ಸೋಮಶೇಖರ್ ಅಭಿನಂದಿಸಿದರು. ಮುಖಂಡರಾದ ಚಿಕ್ಕರಾಜು, ನರಸಿಂಹಮೂರ್ತಿ, ಗೋಪಾಲಕೃಷ್ಣ, ರಾಮಕೃಷ್ಣ ಉಪಸ್ಥಿತರಿದ್ದರು   

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಬಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎನ್.ದೇವರಾಜ್ ಅವರು ಅವಿರೋಧವಾಗಿ ಆಯ್ಕೆಯಾದರು.

ರಾಮಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. 50 ಸದಸ್ಯರ ಸಂಖ್ಯಾ ಬಲದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ದೇವರಾಜ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಿಇಒ ಜಯಲಕ್ಷ್ಮಿ ಅವರು ದೇವರಾಜ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಧ್ಯಕ್ಷ ಎನ್.ದೇವರಾಜ್ ಮಾತನಾಡಿ, ‘ಬೆಂಗಳೂರು ನಗರ ವ್ಯಾಪ್ತಿಗೆ ಹೊಂದಿಕೊಂಡಂತಿರುವ ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಸಮರ್ಪಕ ಮೂಲಸೌಕರ್ಯ ಒದಗಿಸುವುದು ಸವಾಲಿನ ಕೆಲಸವಾಗಿದೆ. ಶಾಸಕರ ನೆರವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜನರ ನಿರೀಕ್ಷೆಗೆ ಪೂರಕವಾಗಿ ಕಾರ್ಯನಿರ್ವಹಣೆ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

ಶಾಸಕ ಎಸ್.ಟಿ. ಸೋಮಶೇಖರ್ ಅವರು ದೇವರಾಜ್‌ ಅವರನ್ನು ಅಭಿನಂದಿಸಿ ಮಾತನಾಡಿದರು.

ಕುಂಬಳಗೋಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಚಿಕ್ಕರಾಜು, ರಾಮಕೃಷ್ಣ, ನರಸಿಂಹ ಮೂರ್ತಿ, ವೆಂಕಟೇಗೌಡ, ಉಪಾಧ್ಯಕ್ಷ ಗೋಪಾಲಕೃಷ್ಣ, ರಾಮೋಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಚ್.ಪ್ರಭು, ಚಂದ್ರಪ್ಪ, ಶ್ರೀನಿವಾಸ್, ಚೇತನ್ ನಂಜೇಗೌಡ, ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಣಸಿದ್ದಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.