ADVERTISEMENT

ದಾಖಲೆ ಪರಿಶೀಲನೆ ನೆಪದಲ್ಲಿ ವಾಹನ ತಡೆಯದಂತೆ ಸಂಚಾರ ಪೊಲೀಸರಿಗೆ ಡಿಜಿ–ಐಜಿಪಿ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 11:15 IST
Last Updated 27 ಜೂನ್ 2022, 11:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: 'ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು, ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆಯನ್ನುಂಟು ಮಾಡಬಾರದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಂಚಾರ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

‘ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನಿಲ್ಲುವ ಪೊಲೀಸರು, ವಾಹನ ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ದಟ್ಟಣೆ ಹೆಚ್ಚಾಗುತ್ತಿದೆ’ ಎಂಬುದಾಗಿ ಸಾರ್ವಜನಿಕರೊಬ್ಬರು ಟ್ವೀಟ್ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಪ್ರವೀಣ್ ಸೂದ್, ‘ದಾಖಲೆ ನೆಪದಲ್ಲಿ ವಾಹನ ತಡೆಯಬೇಡಿ. ಕಣ್ಣಿಗೆ ಕಾಣುವಂತೆ ನಿಯಮ ಉಲ್ಲಂಘನೆಯಾದರೆ ಹಾಗೂ ಮದ್ಯ ತಪಾಸಣೆಗೆ ಅಗತ್ಯವಿದ್ದರೆ ವಾಹನ ತಪಾಸಣೆ ಮಾಡಿ’ ಎಂದಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹಾಗೂ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೂ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.