ಧರ್ಮಸ್ಥಳ ಪ್ರಕರಣ
ಬೆಂಗಳೂರು: ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಸೆ.25ರಂದು ಬೆಳಿಗ್ಗೆ 10.30ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನ್ಯಾಯ ಸಮಾವೇಶ’ ಹಮ್ಮಿಕೊಂಡಿದೆ.
ಜನಪರ ಸಂಘಟನೆಗಳು, ಎಡ, ದಲಿತ, ಹಿಂದುಳಿದ ಸಂಘಟನೆಗಳು, ವಿದ್ಯಾರ್ಥಿ, ಯುವಜನ, ಲೈಂಗಿಕ ಅಲ್ಪಸಂಖ್ಯಾತ, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಭಾಷ್ ಚಂದ್ರ ಬೋಸ್ ಅವರ ನಿಕಟವರ್ತಿ ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್ ಅವರ ಪುತ್ರಿ ಸುಭಾಷಿಣಿ ಅಲಿ ಭಾಗವಹಿಸಲಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ನೂರಾರು ಅಸಹಜ ಸಾವು, ಭೂ ಅಕ್ರಮ, ಮೈಕ್ರೊ ಫೈನಾನ್ಸ್ ಹೆಸರಿನಲ್ಲಿ ನಡೆಯುವ ದೌರ್ಜನ್ಯ, ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಕೊಲೆ, ಅಶೋಕನಗರ, ಮುಂಡ್ರುಪಾಡಿಯ ದಲಿತ ಕುಟುಂಬಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಎಸ್ಐಟಿಯಿಂದ ಸಮಗ್ರ ತನಿಖೆ ನಡೆಸುವಂತೆ ಸಮಾವೇಶದಲ್ಲಿ ಆಗ್ರಹಿಸಲಾಗುವುದು ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.