
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ‘ಕೊಂದವರು ಯಾರು’ ಆಂದೋಲನದ ಪ್ರತಿನಿಧಿಗಳು ಬುಧವಾರ ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಈ ನಿಯೋಗದಲ್ಲಿ ಹೋರಾಟಗಾರರಾದ ಕೆ.ಎಸ್.ವಿಮಲಾ, ಆಶಾ ರಮೇಶ್ ಮತ್ತು ಮಲ್ಲಿಗೆ ಸಿರಿಮನೆ ಇತರರು ಇದ್ದರು.
ಮುಂದಿನ ಹಂತದ ತನಿಖೆ ವೇಳೆ ದೂರುದಾರರು ಹಾಗೂ ಸಾಕ್ಷಿಗಳಿಗೆ ರಕ್ಷಣೆ ಒದಗಿಸಬೇಕು. ಸಾಕ್ಷ್ಯ ಸಂಗ್ರಹದಲ್ಲಿ ಎಚ್ಚರಿಕೆ ವಹಿಸಬೇಕು. ಹಿಂದಿನ ಪ್ರಕರಣಗಳು ಮತ್ತು ಸಾಕ್ಷಿಗಳ ಸಾವುಗಳ ತನಿಖೆ, ಮರು ಪರಿಶೀಲನೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ತನಿಖೆಗೆ ಅಡ್ಡಿಪಡಿಸಿದವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಬೇಕು ಎಂದು ನಿಯೋಗವು ಆಗ್ರಹಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.