ADVERTISEMENT

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮಹಿಳೆಯರ ನಾಪತ್ತೆ ಕೇಸ್: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 15:42 IST
Last Updated 21 ಜುಲೈ 2025, 15:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಾಪತ್ತೆ ಆಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದು ಶ್ಲಾಘನೀಯ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ‘ನಾವೆದ್ದು ನಿಲ್ಲದಿದ್ದರೆ–ಕರ್ನಾಟಕ’ ಸಂಘಟನೆ ಆಗ್ರಹಿಸಿದೆ. 

ADVERTISEMENT

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳಾದ ಕೆ.ಎಸ್. ವಿಮಲಾ, ಅಕ್ಕೈ ಪದ್ಮಶಾಲಿ, ಮೈತ್ರೇಯಿ ಕೃಷ್ಣನ್, ಮಲ್ಲಿಗೆ, ‘ಎಸ್‌ಐಟಿ ತಂಡ ಯಾವುದೇ ರೀತಿಯ ಪ್ರಭಾವ, ಲಾಬಿಗೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಭಾಗದಲ್ಲಿ ಅನೇಕ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬ ಆರೋಪಗಳಿವೆ. ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಆದ್ದರಿಂದ ಈ ವ್ಯಕ್ತಿಗೆ ಹಾಗೂ ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು. ಸಾಕ್ಷಿದಾರನಾಗಿರುವ ಈ ವ್ಯಕ್ತಿಯು 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೆದಿರುವ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದ್ದಾರೆ. ಕೊಲೆಯಾದ ಹೆಣ್ಣುಮಕ್ಕಳ ಕುಟುಂಬಸ್ಥರಿಗೂ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಧಾರ್ಮಿಕ ಸಂಸ್ಥೆಗಳ ದುರ್ಬಳಕೆಯನ್ನು ತಡೆಗಟ್ಟಬೇಕು. ಧರ್ಮಸ್ಥಳದ ದೇವಸ್ಥಾನದ ಆಡಳಿತವನ್ನು ಸರ್ಕಾರ ಮುಜರಾಯಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.