ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಡೆದ ನಿಗೂಢ ಕೊಲೆಗಳ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದು ಶ್ಲಾಘನೀಯ.ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಡಿ. ಮಹೇಶ್ ಗೌಡ, ‘ಧರ್ಮಸ್ಥಳದಲ್ಲಿ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಕೊಲೆ ಪ್ರಕರಣಗಳಲ್ಲಿ ಪ್ರಭಾವಿ ವ್ಯಕ್ತಿಗಳು ಇರುವ ಸಾಧ್ಯತೆ ಇದೆ. ಇವರಿಗೆ ಆಡಳಿತ ಹಾಗೂ ವಿರೋಧ ಪಕ್ಷದ ರಾಜಕೀಯ ಮುಖಂಡರ ಬೆಂಬಲವಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಕರ್ನಾಟಕ ಪಜ್ಞಾವಂತ ಜನತಾ ಪಕ್ಷದಿಂದ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ
ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.