ಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ 2018ರಿಂದ 2025ರವರೆಗೆ ನಡೆದಿರುವ ಎಲ್ಲ ಹಣಕಾಸು ವ್ಯವಹಾರಗಳ ಲೆಕ್ಕ ಪರಿಶೋಧನೆ ನಡೆಸುವಂತೆ ಕರ್ನಾಟಕ ಲೆಕ್ಕಪತ್ರ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವಿ.ವಿಯ ಲೆಕ್ಕಪರಿಶೋಧನಾ ಸ್ಥಾನಕ್ಕೆ ಪೂಜಾ ದೊಡ್ಡಮನಿ ಅವರನ್ನು ನೇಮಕ ಮಾಡಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಶಿವಪುತ್ರ ಎಂ.ಹೊನ್ನಾಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಕಳೆದ ಏಳು ವರ್ಷಗಳಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಹಣಕಾಸು ಅಥವಾ ಖರ್ಚುಗಳನ್ನು ನಿಯಂತ್ರಿಸುವ ‘ನಿಯಂತ್ರಕ’ ಹುದ್ದೆ ನಿಭಾಯಿಸಿರುವುದು ಕಾನೂನ ಬಾಹಿರ’ ಎಂದು ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ‘ಲೆಕ್ಕಪರಿಶೋಧನೆ ಸಮಯದಲ್ಲಿ ಯಾವುದೇ ಅಕ್ರಮ ಮತ್ತು ಹಣಕಾಸಿನ ದುರುಪಯೋಗ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.