
ಪ್ರಜಾವಾಣಿ ವಾರ್ತೆಬೆಂಗಳೂರು: ಧಾರವಾಡದಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಎಸ್‌ಯುಸಿಐ(ಸಿ) ಹೇಳಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ತುಂಬಬೇಕು. ವಯೋಮಿತಿಯನ್ನು ಹೆಚ್ಚಿಸಬೇಕು. ನೇಮಕಾತಿ ಪರೀಕ್ಷೆಗಳ ಶುಲ್ಕ ಕಡಿತ ಮಾಡಬೇಕು. ಭ್ರಷ್ಟಾಚಾರ ತಡೆಗಟ್ಟಬೇಕು. ನೇಮಕಾತಿ ಪರೀಕ್ಷೆಗಳಿಗೆ ಪ್ರಯಾಣಿಸುವವರಿಗೆ ಉಚಿತ ಸಾರಿಗೆ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಉದ್ಯೋಗಾಂಕ್ಷಿಗಳು ಹೋರಾಟ ನಡೆಸುತ್ತಿದ್ದರು. ಈ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಅಭ್ಯರ್ಥಿಗಳನ್ನು ಬಂಧಿಸಿರುವುದು ಖಂಡನೀಯ ಎಂದು ಪದಾಧಿಕಾರಿಗಳು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.