
ಪ್ರಜಾವಾಣಿ ವಾರ್ತೆ
ಬೆಂಗಳೂರು: ಡೆಕ್ಕನ್ ಹೆರಾಲ್ಡ್ ಇನ್ ಎಜುಕೇಶನ್ (ಡಿಎಚ್‌ಐಇ) ವತಿಯಿಂದ ಡಿ.3ರಿಂದ ಡಿ.5ರವರೆಗೆ ಕಬ್ಬನ್ ಉದ್ಯಾನದ ಬಾಲ ಭವನದಲ್ಲಿ ‘ಡಿಎಚ್‌ಐಇ ಎಕ್ಸ್‌ಪ್ರೆಷನ್ಸ್’ ಶೀರ್ಷಿಕೆಯಡಿ ಅಂತರ ಶಾಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ
ಮೂರು ದಿನಗಳ ಈ ಸ್ಪರ್ಧೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪ್ರತಿದಿನ 400ರಿಂದ 500 ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಡಿ.3ರಂದು ರಸಪ್ರಶ್ನೆ ಮತ್ತು ಚಿತ್ರಕಲೆ ಸ್ಪರ್ಧೆ ನಡೆಯಲಿದೆ. ಡಿ.4ರಂದು ಸ್ಪೆಲ್ ಬೀ ಮತ್ತು ವರ್ಡ್ ವೈಂಡರ್, ಡಿ.5ರಂದು ನೃತ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.