ADVERTISEMENT

ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ದಿಢೀರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 20:12 IST
Last Updated 3 ಜುಲೈ 2019, 20:12 IST
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೀಶ್‌ ಗೌಡ ಜನರ ಸಮಸ್ಯೆ ಆಲಿಸಿದರು
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೀಶ್‌ ಗೌಡ ಜನರ ಸಮಸ್ಯೆ ಆಲಿಸಿದರು   

ದಾಬಸ್ ಪೇಟೆ: ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯೋಗೀಶ್ ಗೌಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಕೆಲವು ಸಮಸ್ಯೆಗಳನ್ನು ಕಂಡು ಗರಂ ಆದರು. ಸಂಬಂಧಿಸಿದವರನ್ನು ತರಾಟೆಗೆ ತೆಗೆದುಕೊಂಡರು. ‘ಕೆಲ ವ್ಯತ್ಯಾಸಗಳು ಇರುವುದು ಕಂಡು ಬಂದಿದೆ. ಅದನ್ನು ಸರಿ ಮಾಡಿಕೊಳ್ಳುವಂತೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ’ ಎಂದು ತಿಳಿಸಿದರು.

ಸಮವಸ್ತ್ರ ಧರಿಸದ ನರ್ಸ್‌ಗಳನ್ನು ತರಾಟೆಗೆ ತೆಗೆದುಕೊಂಡರು. ಗೈರುಹಾಜರಾದ ಡಿ ಗ್ರೂಪ್‌ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವುದಾಗಿ ಹೇಳಿದರು. ‘ವೈದ್ಯರ ಕೊರತೆ ನೀಗಿಸಲು ಶಿವಗಂಗೆ, ನರಸೀಪುರ, ಎಲೆಕ್ಯಾತನಹಳ್ಳಿಯಲ್ಲಿನ ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.