ADVERTISEMENT

ಉಗ್ರರಿಂದ ಆತಂಕ ಮೋದಿ ಅವಧಿಯಲ್ಲೇ ಹೆಚ್ಚು: ದಿನೇಶ್‌ ಗುಂಡೂರಾವ್‌ ಟೀಕೆ

ಪ್ರಧಾನಿ ಮೋದಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 19:30 IST
Last Updated 19 ಫೆಬ್ರುವರಿ 2019, 19:30 IST

ಬೆಂಗಳೂರು: ‘ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಉಗ್ರವಾದಿ ಚಟುವಟಿಕೆ ಹೆಚ್ಚಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿದ ಅವರು, ‘ಉಗ್ರವಾದವನ್ನು ಹತ್ತಿಕ್ಕುವ ಬದಲು ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸಿದ್ದಾರೆ’ ಎಂದು ದೂರಿದರು.

ಪ್ರತೀಕಾರ ತೀರಿಸಿಕೊಳ್ಳಬೇಕು: ಖಾದರ್‌

ADVERTISEMENT

‘ಉಗ್ರರ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಗಂಭೀರ ನಿಲುವು ತೆಗೆದುಕೊಳ್ಳಬೇಕು’ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.

‘ಪಾಕಿಸ್ತಾನಕ್ಕೆ ತೆರಳಿ ಚಹಾ ಕುಡಿದು ಬರುವುದು ಅಥವಾ ಭಾರತಕ್ಕೆ ಬಂದವರಿಗೆ ಸೀರೆ ಕೊಟ್ಟು ಕಳುಹಿಸುವ ಬದಲು ಪ್ರತೀಕಾರ ತೀರಿಸಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.