ADVERTISEMENT

ಮೂರು ದಶಕದಿಂದ ನ್ಯಾಯ ಸಿಕ್ಕಿಲ್ಲ: ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2022, 22:15 IST
Last Updated 19 ಡಿಸೆಂಬರ್ 2022, 22:15 IST
ಧರಣಿಯಲ್ಲಿ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಹೋರಾಟಗಾರರಾದ ಎಸ್. ಮಾರೆಪ್ಪ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನಿ, ಹೆಣ್ಣೂರು ಶ್ರೀನಿವಾಸ್‌, ನಾಗಮಣಿ, ಹನುಮೇಶ್ ಗುಂಡೂರ್, ಸುರೇಶ್, ಕೆ.ಎನ್. ನಾಗೇಶ್ ಇದ್ದರು.
ಧರಣಿಯಲ್ಲಿ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಹೋರಾಟಗಾರರಾದ ಎಸ್. ಮಾರೆಪ್ಪ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನಿ, ಹೆಣ್ಣೂರು ಶ್ರೀನಿವಾಸ್‌, ನಾಗಮಣಿ, ಹನುಮೇಶ್ ಗುಂಡೂರ್, ಸುರೇಶ್, ಕೆ.ಎನ್. ನಾಗೇಶ್ ಇದ್ದರು.   

ಬೆಂಗಳೂರು: ‘ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮೂರು ದಶಕಗಳಿಂದ ಹೋರಾಟ ನಡೆಸಿದರೂ ಮಾದಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ’ ಎಂದು ಆದಿಜಾಂಬವ ಕೋಡಿಹಳ್ಳಿ ಬೃಹನ್ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ 8ನೇ ದಿನದ
ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿಯಲ್ಲಿನ ಮಾದಿಗ ಸಮುದಾಯಕ್ಕೆ ಎಲ್ಲ ಕ್ಷೇತ್ರಗಳಲ್ಲೂ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ
ಅನಿವಾರ್ಯವಾಗಿದೆ’ ಎಂದು ಪ್ರತಿಪಾದಿಸಿದರು.

ADVERTISEMENT

‌‘ಒಳ ಮೀಸಲಾತಿ ಬೇಡಿಕೆ ಆಧರಿಸಿ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರ ವರದಿ ಸ್ವೀಕರಿಸಿ ಸುಮ್ಮನಾಯಿತು. ಇನ್ನು ಜೆಡಿಎಸ್‌ ಪಕ್ಷ ನಮ್ಮ ಹಕ್ಕೊತ್ತಾಯದ ಬಗ್ಗೆ ಗಮನವನ್ನೇ ಹರಿಸಿಲ್ಲ’ ಎಂದು ಸ್ವಾಮೀಜಿ ಹೇಳಿದರು.

‘ಬೇರೆಯವರ ತಟ್ಟೆಗೆ ನಾವು ಕೈ ಹಾಕುವುದಿಲ್ಲ. ನಮಗೆ ಸಿಗಬೇಕಾದ ಅನ್ನವನ್ನು ಉಂಡ ಜನರೇ ಈಗಲಾ ದರೂ ಒಳ ಮೀಸಲಾತಿಗೆ ಅವಕಾಶ ಕೊಡಬೇಡಿ, ನಮ್ಮ ಹೋರಾಟ ಅನ್ಯ ಪರಿಶಿಷ್ಟರ ವಿರುದ್ಧ ಅಲ್ಲ, ಅನ್ಯಾಯದ ವಿರುದ್ಧ. ಸದಾಶಿವ ಆಯೋಗದ ವರದಿಯನ್ನುಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರ ಮಂಡಿಸಬೇಕು. ಚರ್ಚೆ ನಡೆಸಿ ಕೇಂದ್ರಕ್ಕೆ ಕಳುಹಿಸಬೇಕು’ ಎಂದು ಸ್ವಾಮೀಜಿ ಒತ್ತಾಯಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.