ADVERTISEMENT

ಮಸೀದಿಗಳಿಂದ ಶಬ್ಧ ಮಾಲಿನ್ಯದ ಬಗ್ಗೆ ಹೈಕೋರ್ಟ್‌ ಪರಿಶೀಲನೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 0:00 IST
Last Updated 24 ಸೆಪ್ಟೆಂಬರ್ 2020, 0:00 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಥಣಿಸಂದ್ರದ ಭರತ್‌ನಗರದಲ್ಲಿ ಏಳು ಮಸೀದಿಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಂಪಿಗೆಹಳ್ಳಿ ಮತ್ತು ಹೆಣ್ಣೂರು ಠಾಣೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಧ್ವನಿವರ್ಧಕಗಳನ್ನು ಬಳಸುವ ಮೂಲಕ ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ. ‘ಧ್ವನಿವರ್ಧಕ ಬಳಸುವ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮ ಉಲ್ಲಂಘನೆಯಾಗುತ್ತಿದ್ದರೆ ಕಾನೂನಿನ ಅಡಿ ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸರಿಗೆ ಪೀಠ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.