BBMP
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಏಳು ಸದಸ್ಯರ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್, ಜಲಮಂಡಳಿಯ ಅಧ್ಯಕ್ಷ, ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿಗಳು ಪ್ರಾಧಿಕಾರದ ಸದಸ್ಯರಾಗಿರುತ್ತಾರೆ.
ವಿಪತ್ತು ನಿರ್ವಹಣಾ ಯೋಜನೆ ತಯಾರಿಸುವುದು, ಪ್ರವಾಹ ಸೇರಿದಂತೆ ಅತಿ ಸಂಕಷ್ಟಕ್ಕೆ ಒಳಗಾಗುವ ಪ್ರದೇಶ ಗಳನ್ನು ಗುರುತಿಸಿ, ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳನ್ನು ನಿರ್ಧರಿಸುವುದು, ಸರ್ಕಾರೇತರ ಸಂಸ್ಥೆಗಳನ್ನು ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳುವಂತೆ ಉತ್ತೇಜಿಸುವುದು ಪ್ರಾಧಿಕಾರದ ಜವಾಬ್ದಾರಿಯಾಗಿದೆ. ಎರಡು ವರ್ಷಕ್ಕೊಮ್ಮೆ ಯೋಜನೆಯನ್ನು ಉನ್ನತೀಕರಿಸಲು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.