ADVERTISEMENT

ಚುನಾವಣಾ ತರಬೇತಿಗೆ ಗೈರಾದವರ ಮೇಲೆ ಶಿಸ್ತು ಕ್ರಮ: ತುಷಾರ್‌ ಗಿರಿನಾಥ್‌

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 20:42 IST
Last Updated 17 ಏಪ್ರಿಲ್ 2024, 20:42 IST
ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ನಡೆಯುತ್ತಿರುವ ಕೇಂದ್ರಗಳಿಗೆ ಬುಧವಾರ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿದರು.
ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ನಡೆಯುತ್ತಿರುವ ಕೇಂದ್ರಗಳಿಗೆ ಬುಧವಾರ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿದರು.   

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತಗಟ್ಟೆ ಅಧಿಕಾರಿಗಳಿಗೆ ಬುಧವಾರ ನಡೆದ 2ನೇ ಹಂತದ ತರಬೇತಿಯನ್ನು ಪರಿಶೀಲಿಸಲು ಶಿವಾಜಿನಗರ, ಗಾಂಧಿನಗರ, ಶಾಂತಿನಗರದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.

ವಿವಿ ಪ್ಯಾಟ್, ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯೂನಿಟ್ ಹೇಗೆ ಕಾರ್ಯನಿರ್ವಹಿಸಲಿದೆ? ಯಾವ ರೀತಿ ಸಂಪರ್ಕ ನೀಡಬೇಕು ಎಂಬುದನ್ನು ಸರಿಯಾಗಿ ನೋಡಿಕೋಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಮತದಾನದ ಕುರಿತು ಹೆಚ್ಚು ಮಾಹಿತಿಗಾಗಿ ಮತಗಟ್ಟೆ ಕೈಪಿಡಿಯನ್ನು ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳ ಕೈಪಿಡಿಯು ಭಾರತ ಚುನಾವಣಾ ಅಯೋಗ ಹಾಗೂ ಕರ್ನಾಟಕ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲೂ ಲಭ್ಯವಿದ್ದು, ಅಲ್ಲಿಯೂ ಡೌನ್‌ಲೋಡ್ ಮಾಡಿಕೊಂಡು ವಿವರಗಳನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಸಹಾಯಕ ಚುನಾವಣಾಧಿಕಾರಿಗಳಾದ ಚಿದಾನಂದ ಎಸ್. ವಠಾರೆ, ಕಮಲಾ ಬಾಯಿ, ಮಮತಾ ಕುಮಾರಿ, ಮತದರಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.