ADVERTISEMENT

ಕೆಆರ್‌ ಪುರದಲ್ಲಿ ಮಲ ಹೊರುವ ಪದ್ಧತಿ ಅಂತ್ಯ: ಹರ್ಷವರ್ಧನಗೆ ಸಿಎಂ ಪ್ರಶಂಸೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 13:15 IST
Last Updated 18 ಆಗಸ್ಟ್ 2021, 13:15 IST
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಿದ ಶಾಸಕ ಹರ್ಷವರ್ಧನ
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಿದ ಶಾಸಕ ಹರ್ಷವರ್ಧನ   

ಬೆಂಗಳೂರು: ಕೆಆರ್ ಪುರದಲ್ಲಿ ಮಲ ಹೊರುವ ಪದ್ಧತಿ ಅಂತ್ಯಗೊಂಡ ಬಗ್ಗೆ ಶಾಸಕ ಹರ್ಷವರ್ಧನ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಿದರು.

ತಮ್ಮ ಅಜ್ಜ, ಮಾಜಿ ಸಚಿವ ಬಿ ಬಸವಲಿಂಗಪ್ಪ ಅವರು 50 ವರ್ಷಗಳ ಹಿಂದೆ ಮಲಹೊರುವ ಪದ್ಧತಿಯನ್ನು ಅಂತ್ಯಗೊಳಿಸುವ ಕುರಿತು ವಿಧಾನಸೌಧದಲ್ಲಿ ಘೋಷಣೆ ಮಾಡಿದ್ದರು. ಈಗ ತಾವು ಶಾಸಕರಾದ ನಂತರ ಮೊದಲ ಆದ್ಯತೆಯಾಗಿ ಕೆಆರ್ ಪುರದಲ್ಲಿ ಇಂದಿಗೂ ನಡೆದುಕೊಂಡು ಬಂದಿರುವ ಅಮಾನವೀಯ ಪದ್ಧತಿಗೆ ತಿಲಾಂಜಲಿ ನೀಡಿದ್ದೇನೆ ಎಂದು ಹರ್ಷವರ್ಧನ್ ತಿಳಿಸಿದರು.

ಸಮಸ್ಯೆಗಳನ್ನು ನಿವಾರಿಸಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ಗ್ರಾಮದ ಜನರು ಈಗ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಗ್ರಾಮದ ಜನರಲ್ಲಿ ಸಂತಸ ಮೂಡಿದೆ ಎಂದು ಹರ್ಷವರ್ಧನ್‌ ಹೇಳಿದರು.

ADVERTISEMENT

ಹರ್ಷವರ್ಧನ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬೊಮ್ಮಾಯಿ, ನಿಮ್ಮ ಕಾರ್ಯ ಶ್ಲಾಘನೀಯ. ಇಡೀ ಕ್ಷೇತ್ರದಲ್ಲಿ ಇಂತಹ ಮಾದರಿ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.