ADVERTISEMENT

ಬೆಂಗಳೂರು: ಚಾಲಕ-ಕಂ-ನಿರ್ವಾಹಕ‌ರಿಗೆ ನೇಮಕಾತಿ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 16:16 IST
Last Updated 17 ಜೂನ್ 2025, 16:16 IST
ರಾಮಲಿಂಗಾರೆಡ್ಡಿ ಅವರು ಸಾಂಕೇತಿಕವಾಗಿ 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು. ಎಸ್.ಆರ್. ಶ್ರೀನಿವಾಸ್, ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ
ರಾಮಲಿಂಗಾರೆಡ್ಡಿ ಅವರು ಸಾಂಕೇತಿಕವಾಗಿ 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು. ಎಸ್.ಆರ್. ಶ್ರೀನಿವಾಸ್, ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಉಪಸ್ಥಿತರಿದ್ದರು ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೆಎಸ್‌ಆರ್‌ಟಿಸಿಗೆ ಹೊಸದಾಗಿ ನೇಮಕಗೊಂಡ ಎರಡು ಸಾವಿರ ಚಾಲಕ-ಕಂ-ನಿರ್ವಾಹಕ‌ರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು. 

ನಂತರ ಮಾತನಾಡಿದ ಅವರು, ‘ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ, ಬೆಳೆಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಪ್ರಯಾಣಿಕರೊಂದಿಗೆ ಅದರಲ್ಲೂ ಮಹಿಳೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅಪಘಾತಗಳು ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು. 

ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್‌ ಮಾತನಾಡಿ, ‘ಕೆಎಸ್‌ಆರ್‌ಟಿಸಿಯಲ್ಲಿ ಎಂಟು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿರಲಿಲ್ಲ. ರಾಮಲಿಂಗಾರೆಡ್ಡಿ ಅವರು ಈ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲದೇ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಜತೆಗೆ ಅಂಕಗಳ ಆಧಾರದ ಮೇಲೆ ಘಟಕಗಳಿಗೆ ಇವರನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ನಿರ್ದೇಶಕಿ ನಂದಿನಿ ದೇವಿ ಕೆ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.