ADVERTISEMENT

ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಪುಸ್ತಕಗಳ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 16:01 IST
Last Updated 2 ಮಾರ್ಚ್ 2026, 16:01 IST
<div class="paragraphs"><p>ಪುಸ್ತಕ</p></div>

ಪುಸ್ತಕ

   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಬಾಲ್ಕ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಎನ್. ನಟರಾಜ್‌ಗೌಡ ಹೇಳಿದರು. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾಗಿ ರಚಿಸಿರುವ ವೃತ್ತಿ ಮಾರ್ಗದರ್ಶನದ 25 ಸಾವಿರ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಪುಸ್ತಕದಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲಭ್ಯ ಇರುವ ನವೀನ ಕೋರ್ಸ್‌ಗಳು, ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಇದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಈ ಪುಸ್ತಕ ಸಹಾಯಕವಾಗಲಿದೆ’ ಎಂದು ವಿವರಿಸಿದರು. 

ADVERTISEMENT

‘ಸುಂಕದಕಟ್ಟೆ, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಜಯನಗರ, ಟೋಲ್‌ಗೇಟ್, ಉಲ್ಲಾಳು ರಸ್ತೆ, ಕೆಂಗೇರಿ ಉಪನಗರ, ಕೋಣನಕುಂಟೆ ಕ್ರಾಸ್, ಕೇಂಬ್ರಿಡ್ಜ್‌ ಲೇಔಟ್, ನೆಲಮಂಗಲ, ಯಲಹಂಕ, ದೇವನಹಳ್ಳಿಯಲ್ಲಿ ಇರುವ ಬಾಲ್ಕ್‌ ಸಂಸ್ಥೆಯ ಶಾಖೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳು ನೀಡಿರುವ ಗುರುತಿನ ಚೀಟಿ ತೋರಿಸಿ ಪುಸ್ತಕಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು. 

‘ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಯ ನೆರವಿಗಾಗಿ ಸ್ಕಾಲರ್‌ಶಿಪ್‌ ಅಪ್ಟಿಟ್ಯೂಡ್‌ ಟೆಸ್ಟ್‌ (ಎಸ್‌ಎಟಿ) ನಡೆಸಲಾಗುತ್ತಿದೆ. ಮಾರ್ಚ್‌ 22ರಂದು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್‌ 5ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಟೆಸ್ಟ್‌ ನಡೆಸಲಾಗುವುದು’ ಎಂದರು. 

ಮಾಹಿತಿಗೆ: 88844 98884 ಸಂಪರ್ಕಿಸಬಹುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.