ADVERTISEMENT

159 ಮಂದಿಗೆ ಹಕ್ಕು ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 18:34 IST
Last Updated 3 ಫೆಬ್ರುವರಿ 2021, 18:34 IST
ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಹಕ್ಕು ಪತ್ರ ವಿತರಿಸಿದರು. ಬೆಂಗಳೂರು ಉತ್ತರ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್‌ ಶಿವರಾಜ್, ಉಪ ತಹಶೀಲ್ದಾರ್‌ ಚಂದ್ರಕಲಾ ಮತ್ತಿತರರು ಇದ್ದಾರೆ

ಕೆಂಗೇರಿ: ‘ಸ್ವಂತ ಸೂರಿಲ್ಲದೆ ಹಲವಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸ ಮಾಡುತ್ತಿರುವ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಯಶವಂತಪುರ ವಿಧಾನ ಸಭಾ ಕ್ಷೇತ್ರ, ಉಲ್ಲಾಳು ವಾರ್ಡಿನ ಸರ್ಕಾರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 159 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

‘ಎಲ್ಲ ಅರ್ಹ ವಸತಿರಹಿತರಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ. ಕ್ಷೇತ್ರದಲ್ಲಿ ಹಲವಾರು ಮಂದಿ ವಸತಿ ರಹಿತರಿದ್ದಾರೆ. ಹಲವಾರು ಸಮಸ್ಯೆಗಳನ್ನು ಎದುರಿಸುವ ಜೊತೆಗೆ ವಸತಿ ಭದ್ರತೆ ಕೊರತೆಯಿಂದ ಭ್ರಮನಿರಸನಕ್ಕೊಳಗಾದವರಿಗೆ ಹಕ್ಕು ಪತ್ರದ ಒಡೆತನವು ಹೊಸ ಬೆಳಕನ್ನು ಮೂಡಿಸಲಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.