ADVERTISEMENT

ಯಲಹಂಕ: ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಮೇ 2022, 4:01 IST
Last Updated 3 ಮೇ 2022, 4:01 IST
ಕುಮಾರಸ್ವಾಮಿ ಅವರು ಬಡವರಿಗೆ ದಿನಸಿ ಕಿಟ್ ವಿತರಿಸಿದರು. ಜೆಡಿಎಸ್‌ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡ ಟಿ.ಎನ್.ಹರೀಶ್ ಕುಮಾರ್ ಇದ್ದರು.
ಕುಮಾರಸ್ವಾಮಿ ಅವರು ಬಡವರಿಗೆ ದಿನಸಿ ಕಿಟ್ ವಿತರಿಸಿದರು. ಜೆಡಿಎಸ್‌ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡ ಟಿ.ಎನ್.ಹರೀಶ್ ಕುಮಾರ್ ಇದ್ದರು.   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಘಟಕದ ವತಿಯಿಂದ ಹೆಗಡೆನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ರಂಜಾನ್ ಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಕುಟುಂಬಗಳಿಗೆ 5 ಸಾವಿರ ದಿನಸಿ ಕಿಟ್ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ‘ಎಲ್ಲ ಜಾತಿ-ಧರ್ಮದ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಪಕ್ಷದ ಆದ್ಯತೆ ಆಗಿದೆ. ರಂಜಾನ್, ಮುಸಲ್ಮಾನರಿಗೆ ಪವಿತ್ರವಾದ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸ ಮತ್ತು ಅನ್ನದ ಮಹತ್ವ ತಿಳಿಸುವ ಸಲುವಾಗಿ ಈ ಆಚರಣೆಯನ್ನು ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇರುವವರು ಇಲ್ಲದವರಿಗೆ ನೀಡುವ ಪದ್ಧತಿಯಿದೆ’ ಎಂದರು.

ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡರಾದ ಟಿ.ಎ.ಶರವಣ, ಚೌಡರೆಡ್ಡಿ ತೂಪಲ್ಲಿ, ಟಿ.ಎನ್. ಹರೀಶ್ ಕುಮಾರ್, ಎಂ.ಖಲೀಲ್ ಉಲ್ಲಾ, ಸೈಯದ್ ಅನೀಫ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.