ADVERTISEMENT

ವಿಚ್ಛೇದಿತ ಮಹಿಳೆಯ ಮದುವೆಯಾಗಿ ₹36 ಲಕ್ಷ ವಂಚಿಸಿದ್ದಲ್ಲದೇ, ಕೈಕೊಟ್ಟು ಪರಾರಿ

ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 14:24 IST
Last Updated 10 ಜನವರಿ 2026, 14:24 IST
   

ಬೆಂಗಳೂರು: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ ₹36 ಲಕ್ಷ ಪಡೆದುಕೊಂಡು ವಂಚಿಸಿರುವ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬನಶಂಕರಿಯ ನಿವಾಸಿ ಮೋಹನ್‌ ರಾಜ್‌ ವಂಚನೆ ಆರೋಪ ಎದುರಿಸುತ್ತಿರುವ ವ್ಯಕ್ತಿ.

‘10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರುವರಿಯಲ್ಲಿ ಮಗು ಜನಿಸಿತ್ತು. ಕಳೆದ ವರ್ಷ ಆತ ಮನೆ ಬಿಟ್ಟು ಹೋಗಿದ್ದಾನೆ’ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.

ADVERTISEMENT

‘ಹೊಸ ಮನೆ ಕಟ್ಟೋಣ ಎಂದು ಮೋಹನ್‌ ರಾಜ್‌ ನಂಬಿಸಿದ್ದ. ಆತನ ಮಾತು ನಂಬಿ ಚಿನ್ನಾಭರಣ ಅಡವಿಟ್ಟು ₹36 ಲಕ್ಷ ಸಾಲ ಪಡೆದು ಆತನಿಗೆ ನೀಡಿದ್ದೆ. ಆ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.  

‘ನ್ಯಾಯ ಕೇಳಲು ಹೋದರೆ ನನ್ನ ಮೇಲೆ ಹಲ್ಲೆ ನಡೆಸಿದ್ದ. ನಾಲ್ಕು ಬಾರಿ ಪೊಲೀಸ್ ಠಾಣೆಗೆ ಹೋಗಿದ್ದರೂ ನ್ಯಾಯ ದೊರೆಯುತ್ತಿಲ್ಲ. ಮತ್ತೆ ದೂರು ನೀಡಿದರೆ ನನ್ನ ಮೇಲೆಯೇ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದರು’ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.

2021ರಲ್ಲಿ ಮೊದಲ ಪತಿಯಿಂದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.