ADVERTISEMENT

ಕ್ಲೇಮ್ ಕಮಿಷನರ್‌ಗೆ ಅಧಿಕಾರ ನೀಡಲು ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:14 IST
Last Updated 29 ಸೆಪ್ಟೆಂಬರ್ 2020, 21:14 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯಿಂದ ಆಗಿರುವ ಹಾನಿಯ ಹೊಣೆಗಾರಿಕೆ ನಿಗದಿ ಮಾಡಲು ನೇಮಕ ಆಗಿರುವ ಕ್ಲೇಮ್ ಕಮಿಷನರ್ ಅವರಿಗೆವಿಚಾರಣಾ ಆಯೋಗ ಕಾಯ್ದೆಯಡಿ ಕೆಲವು ಅಧಿಕಾರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

‘ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್. ಕೆಂಪಣ್ಣ ಅವರು ಕ್ಲೇಮ್ ಕಮಿಷನರ್ ಆಗಿ ನೇಮಕಗೊಂಡಿದ್ದು,ವಿಚಾರಣಾ ಆಯೋಗದ ಅಡಿಯಲ್ಲಿ ಅವರಿಗೆ ರಕ್ಷಣೆ ಬೇಕಿದೆ. ವಿಚಾರಣೆಗೆ ಸಾಕ್ಷಿಗಳನ್ನು ಕರೆಸಿಕೊಳ್ಳಲು ಅಧಿಕಾರ ನೀಡಬೇಕಿದೆ’ ಎಂದುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ಈ ಪ್ರಕರಣದ ತನಿಖೆಯ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಮತ್ತು ಪೊಲೀಸ್ ಇಲಾಖೆಗೆ ಪೀಠ ನಿರ್ದೇಶನ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.