ADVERTISEMENT

ಡಿ.ಜೆ.ಹಳ್ಳಿ ಗಲಭೆ ತನಿಖೆ ಶುರು: 12 ಕಡೆ ಎನ್‌ಐಎ ದಾಳಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 10:05 IST
Last Updated 24 ಸೆಪ್ಟೆಂಬರ್ 2020, 10:05 IST
ಗಲಭೆಯ ಚಿತ್ರ
ಗಲಭೆಯ ಚಿತ್ರ   

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು, ಗುರುವಾರ ನಗರದ 12 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದರು.

ಡಿ.ಜೆ. ಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧರಿಸಿ ತನಿಖೆ ಆರಂಭಿಸಿರುವ ಎನ್‌ಐಎ ತಂಡದಲ್ಲಿ ಐಜಿಪಿ ದರ್ಜೆಯ ಅಧಿಕಾರಿ, ಎಸ್ಪಿಗಳು, ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಇದ್ದಾರೆ.

ಮಂಗಳವಾರ ಹಾಗೂ ಬುಧವಾರ ಠಾಣೆಗೆ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದಿದ್ದ ಅಧಿಕಾರಿಗಳು, ಗುರುವಾರ ಬೆಳಿಗ್ಗೆಯೇ 12 ಕಡೆಗಳಲ್ಲಿ ದಾಳಿ ಮಾಡಿ ಮತ್ತಷ್ಟು ಪುರಾವೆಗಳನ್ನು ಕಲೆಹಾಕಿದ್ದಾರೆ.

ADVERTISEMENT

ಘಟನಾ ಸ್ಥಳ, ಆರೋಪಿಗಳ ಮನೆ, ಕೆಲವರ ಕಚೇರಿ ಸೇರಿದಂತೆ ಹಲವೆಡೆ ಎನ್‌ಐಎ ಅಧಿಕಾರಿಗಳು ಶೋಧ ನಡೆಸಿದರು. ದಾಳಿ ಬಳಿಕ ಠಾಣೆಗೆ ಬಂದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.