ADVERTISEMENT

ಡಿಜೆ ಹಳ್ಳಿ ಗಲಭೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 16:08 IST
Last Updated 6 ಡಿಸೆಂಬರ್ 2021, 16:08 IST

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

‘ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಗಲಭೆಯಲ್ಲಿ ಉಂಟಾದ ಹಾನಿಯನ್ನು ಅಂದಾಜಿಸಿ ನಷ್ಟದ ಹೊಣೆಗಾರಿಕೆಯನ್ನು ನಿಗದಿಪಡಿಸಲು ಕ್ಲೇಮ್‌ ಕಮಿಷನರ್ ನೇಮಕ ಮಾಡಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಹಾಯಕ ಸಾಲಿಸಿಟರ್‌ ಜನರಲ್‌ ಎಚ್. ಶಾಂತಿಭೂಷಣ್, ಗಲಭೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ, ಸರ್ಕಾರಕ್ಕೆ ಕೆಲ ನಿರ್ದೇಶನ ನೀಡಿ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿತು. ಅಂತೆಯೇ, ‘ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಯ ಅಗತ್ಯ ಕಂಡು ಬರುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.