ADVERTISEMENT

ಕಾನ್ಫಿಡೆಂಟ್ ಮುಖ್ಯಸ್ಥ CJ ರಾಯ್ ಸಾವಿನ ಕೇಸ್‌ನ ಉನ್ನತ ತನಿಖೆ ಮಾಡ್ತೇವೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 5:15 IST
Last Updated 31 ಜನವರಿ 2026, 5:15 IST
<div class="paragraphs"><p>CJ ರಾಯ್</p></div>

CJ ರಾಯ್

   

ಕನಕಪುರ: ‘ರಿಯಲ್ ಎಸ್ಟೇಟ್ ಕಂಪನಿಯಾದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣದ ಕುರಿತು, ನಮ್ಮ ಸರ್ಕಾರವು ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಪಟ್ಟಣದಲ್ಲಿ ಈ ಕುರಿತು ಶುಕ್ರವಾರ ರಾತ್ರಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅಧಿಕಾರಿಗಳು ಪ್ರಶ್ನೆಗಳನ್ನು ಕೇಳುವಾಗ, ರಾಯ್ ಅವರು ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ’ ಎಂದರು.

ADVERTISEMENT

‘ರಾಯ್ ಅವರ ವಿಚಾರಣೆಗಾಗಿ ಕೇರಳದಿಂದ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ. ಆತ್ಮಹತ್ಯೆ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಯಾದ್ದರು. ಈ ರೀತಿ ಆಗಬಾರದಿತ್ತು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.