ADVERTISEMENT

ಬೆಂಗಳೂರು ನಡಿಗೆ | ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಸಿಎಂ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 6:27 IST
Last Updated 26 ಅಕ್ಟೋಬರ್ 2025, 6:27 IST
<div class="paragraphs"><p>ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸೆಲ್ಫಿ ತೆಗೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್</p></div>

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸೆಲ್ಫಿ ತೆಗೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

   

ಬೆಂಗಳೂರು: ‘ಬೆಂಗಳೂರಿನ ‘ಬಿ‘ ಖಾತಾ ಆಸ್ತಿಗಳನ್ನು ‘ಎ‘ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್ ಅವರು ಸಾರ್ವಜನಿಕರ ಜೊತೆ ಮಾತನಾಡಿದರು.

ADVERTISEMENT

ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ‘ಎ‘ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ‘ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ ಶೇ 5 ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರಿಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ‘ ಎಂದು ನಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.