ADVERTISEMENT

ಕ್ರಿಸ್‌ಮಸ್ ಸಂಭ್ರಮ: ಡಾ.ಪೀಟರ್ ಮಚಾಡೊ ಭೇಟಿಯಾಗಿ ಶುಭ ಕೋರಿದ ಡಿಕೆಶಿ, ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಡಿಸೆಂಬರ್ 2023, 11:53 IST
Last Updated 25 ಡಿಸೆಂಬರ್ 2023, 11:53 IST
<div class="paragraphs"><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಡಾ.ಪೀಟರ್ ಮಚಾಡೊ</p></div>

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಡಾ.ಪೀಟರ್ ಮಚಾಡೊ

   

ಬೆಂಗಳೂರು: ಬೆಂಗಳೂರು ಮಹಾಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಡಾ.ಪೀಟರ್ ಮಚಾಡೊ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಗಣ್ಯರು ಭೇಟಿಯಾಗಿ ಕ್ರಿಸ್‌ಮಸ್‌ ಹಬ್ಬಕ್ಕೆ ಶುಭ ಕೋರಿದ್ದಾರೆ.

ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಯೇಸುವಿನ ಜನ್ಮದಿನಾಚರಣೆಯ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ರಾಜ್ಯದಾದ್ಯಂತ ಮನೆ ಮಾಡಿದ್ದು, ಚರ್ಚ್‌ಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದೆ.

ADVERTISEMENT

ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಚರ್ಚ್‌ಗಳಲ್ಲಿ ಇಂದು ಬೆಳಿಗ್ಗೆ ಧರ್ಮಗುರುಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ಕ್ರೈಸ್ತ ಸಮುದಾಯವರು ಕುಟುಂಬ ಸಮೇತವಾಗಿ ಪ್ರಾರ್ಥನಾ ಮಂದಿರಗಳಿಗೆ ಹೊಸ ಬಟ್ಟೆ ತೊಟ್ಟು ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಮಕ್ಕಳು ಹೊಸ ಬಟ್ಟೆ ತೊಟ್ಟು ಸಂಬಂಧಿಕರಿಗೆ ಕ್ರಿಸ್‌ಮಸ್ ಹಬ್ಬದ ಉಡುಗೊರೆ ವಿತರಿಸಿ ಶುಭಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.