
ಡಿಕೆಶಿ
ಬೆಂಗಳೂರು: ‘ಡಿ.ಕೆ.ಶಿವಕುಮಾರ್ ಅವರು ಅತಿ ಹಿಂದುಳಿದ ವರ್ಗಗಳ ನಾಯಕ. ಅವರು ಮುಖ್ಯಮಂತ್ರಿ ಆಗಬೇಕು’ ಎಂದು ಅತಿಹಿಂದುಳಿದ ವರ್ಗಗಳ ಸ್ವಾಮೀಜಿಗಳು ಆಶಯ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ಛಲವಾದಿ ಜಗದ್ಗುರು ಪೀಠದ ಬಸವನಾಗಿದೇವ ಶರಣರು, ಕುಂಬಾರ ಪೀಠದ ಬಸವಮೂರ್ತಿ ಕುಂಬಾರಗುಡ್ಡಯ್ಯ ಸ್ವಾಮೀಜಿ ಸೇರಿ ಹನ್ನೊಂದು ಸ್ವಾಮೀಜಿಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿಯಾಗಿದ್ದರು.
‘ರಾಜ್ಯದಲ್ಲಿ ಅತಿಹಿಂದುಳಿದವರ ಸಮಾವೇಶ ನಡೆಸಬೇಕು ಮತ್ತು ಆ ಸಮಾವೇಶದ ಅಧ್ಯಕ್ಷತೆಯನ್ನು ತಾವೇ ವಹಿಸಿಕೊಳ್ಳಬೇಕು’ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್ ಅವರು, ‘ಸ್ವಾಮೀಜಿಗಳು ಬಂದು, ನೀವು ಮುಖ್ಯಮಂತ್ರಿ ಆಗಿ ಎಂದು ಹಾರೈಸಿದರು. ಆದರೆ ಅದನ್ನೆಲ್ಲಾ ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.