
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ವಿಡಿಯೊ ಸೃಷ್ಟಿಸಿದ್ದ ಆರೋಪದ ಅಡಿ ‘ಕನ್ನಡ ಚಿತ್ರದುರ್ಗ’ ಎನ್ನುವ ಇನ್‌ಸ್ಟಾಗ್ರಾಂ ಖಾತೆಯ ವಿರುದ್ಧ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.
ಸಿ.ಆರ್.ದೀಪು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಇನ್‌ಸ್ಟಾಗ್ರಾಂ ಖಾತೆದಾರರ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸಮಾಜದಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವಂತೆ ವಿಡಿಯೊವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಲಾಗಿದೆ. ಶಿವಕುಮಾರ್ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶ ಹಾಗೂ ಸಮಾಜಕ್ಕೆ ಸುಳ್ಳು ಮಾಹಿತಿ ಬಿತ್ತಿರಿಸುವ ಉದ್ದೇಶದಿಂದ ಈ ರೀತಿ ಕೃತ್ಯ ಎಸಗಲಾಗಿದೆ. ಸರ್ಕಾರಕ್ಕೂ ಮುಜುಗರ ಉಂಟು ಮಾಡಿರುತ್ತಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.