ಬೆಂಗಳೂರು: ಆರ್‌ಎಸ್ಎಸ್ ವಿಚಾರದಲ್ಲಿ ನಾವು ಹೊಸ ನಿಯಮ ರೂಪಿಸಿಲ್ಲ. ಬಿಜೆಪಿ ಸರ್ಕಾರ ಮಾಡಿದ್ದ ಆದೇಶವನ್ನೇ ಹೊರಡಿಸಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೋರಮಂಗಲದ ವೀರ ಯೋಧ ಉದ್ಯಾನದಲ್ಲಿ ಭಾನುವಾರ ನಡೆಸಿದ ನಾಗರಿಕರೊಂದಿಗೆ ಸಂವಾದದಲ್ಲಿ ಜನರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
‘2013ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಹೊರಡಿಸಿದ್ದ ಆದೇಶವನ್ನು ನಾವು ಮತ್ತೆ ಜಾರಿಗೊಳಿಸುತ್ತಿದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.