ಬೆಂಗಳೂರು: ಇತ್ತೀಚೆಗೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕಿ ಸಮನ್ವಿ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
‘ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಳು. ಆಕೆಯಲ್ಲಿ ಅಗಾಧ ಪ್ರತಿಭೆ ಇತ್ತು. ಚಿಕ್ಕ ವಯಸ್ಸಿನಲ್ಲೇ ಮೃತಪಟ್ಟಿದ್ದು ನೋವಿನ ಸಂಗತಿ’ ಎಂದರು.
ಸಮನ್ವಿಹಾಗೂ ಆಕೆಯ ತಾಯಿ ಅಮೃತಾ ನಾಯ್ಡುಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸ್ಕೂಟಿಯಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿತ್ತು. ಆರು ವರ್ಷದ ಸಮನ್ವಿ ಮೃತಪಟ್ಟಿದ್ದಳು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.