ADVERTISEMENT

ಪ್ರಕರಣದಿಂದ ಕೈಬಿಡುವಂತೆ ಕೋರಿ ಡಿ.ಕೆ.ಶಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 19:35 IST
Last Updated 12 ಜೂನ್ 2019, 19:35 IST

ಬೆಂಗಳೂರು: ‘ದೆಹಲಿಯ ಫ್ಲ್ಯಾಟ್‌ಗಳ ಮೇಲಿನ ಆದಾಯ ತೆರಿಗೆ ದಾಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ನನ್ನನ್ನು ಆರೋಪದಿಂದ ಕೈಬಿಡಬೇಕು’ ಎಂದು ಕೋರಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಇಲ್ಲಿನ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ’ಕ್ಕೆ ಶಿವಕುಮಾರ್‌ ಮತ್ತು ಪ್ರಕರಣದ ಐದನೇ ಆರೋಪಿ ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ, ಅಭಿಯೋಜನೆ ಪರವಾದ ಆದಾಯ ತೆರಿಗೆ ಇಲಾಖೆ ವಕೀಲರು, ‘ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ನ್ಯಾಯಾಧೀಶರನ್ನು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಅವರು, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದರು. ಈ ಪ್ರಕರಣದಲ್ಲಿ ಇ.ಡಿ, ಶಿವಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120–‘ಬಿ’ (ಅಪರಾಧಿಕ ಒಳಸಂಚು) ಅನುಸಾರ ಪ್ರಕರಣ ದಾಖಲಿಸಿದೆ. ಅಂತೆಯೇ ಆದಾಯ ತೆರಿಗೆ ಕಾಯ್ದೆ–1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ’ ಎಂದೂ ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.