ADVERTISEMENT

ಕೇರಳ ಚುನಾವಣೆ: ರಜೆಗೆ ಡಿಕೆಶಿ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 15:31 IST
Last Updated 5 ಡಿಸೆಂಬರ್ 2025, 15:31 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಡಿ.9 ಹಾಗೂ ಡಿ.11ರಂದು ಚುನಾವಣೆ ನಡೆಯಲಿರುವುದರಿಂದ ಕರ್ನಾಟಕದಲ್ಲಿ ನೆಲಸಿರುವ ‌ಅಲ್ಲಿನ ಮತದಾರರು ಮತ ಹಾಕಲು ಅನುವಾಗುವಂತೆ ಮೂರು ದಿನ ವೇತನ ಸಹಿತ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಕೇರಳದವರು ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳು, ವಾಣಿಜ್ಯೋದ್ಯಮ, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು, ಅಂಗಡಿಗಳ ಪ್ರಮುಖರು ರಜೆ ನೀಡುವುದರಿಂದ ತಮ್ಮಲ್ಲಿ ಕೆಲಸ ಮಾಡುತ್ತಿರುವವರು ಮತದಾನದಲ್ಲಿ ‌‌ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.