ADVERTISEMENT

ಕನ್ನಡ ಕಡೆಗಣನೆ: ಎಸ್‌ಬಿಐಗೆ ಸಾಹಿತ್ಯ ಪರಿಷತ್ತು ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:16 IST
Last Updated 22 ಮೇ 2020, 21:16 IST
ಮನು ಬಳಿಗಾರ್
ಮನು ಬಳಿಗಾರ್   

ಬೆಂಗಳೂರು: ಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಪಾಸ್‌ ಬುಕ್‌ಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ಖಂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ), ಕನ್ನಡ ವಿರೋಧಿ ಧೋರಣೆಯನ್ನು ಮುಂದುವರಿಸಿದಲ್ಲಿ ಬ್ಯಾಂಕಿನ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ‌ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಈ ಎಚ್ಚರಿಕೆ ನೀಡಿದ್ದಾರೆ.

‘ಪಾಸ್‌ಬುಕ್‌ನ ಮೇಲೆ ಭಾರತೀಯ ಸ್ಟೇಟ್‌ ಬ್ಯಾಂಕ್‌ ಎಂದು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮುದ್ರಿಸಲಾಗು
ತ್ತದೆ. ಆದರೆ, ಚಾಮರಾಜನಗರ ಶಾಖೆಯ ಪಾಸ್‌ಬುಕ್‌ನಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಕೇಂದ್ರ ಸ್ವಾಮ್ಯದ ಎಲ್ಲ ಬ್ಯಾಂಕುಗಳು ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಆದರೆ, ಈಗ ಭಾರತೀಯ ಸ್ಟೇಟ್‌ ಬ್ಯಾಂಕ್‌ ಈ ನಿಯಮವನ್ನು ಗಾಳಿಗೆ ತೂರಿದೆ. ಭಾಷಾ ನೀತಿಗೆ ಕೂಡ ಇದು ವಿರುದ್ಧವಾಗಿದೆ. 1968ರಲ್ಲಿ ಕೇಂದ್ರ ಸರ್ಕಾರವೇ ಜಾರಿಗೆ ತಂದಿರುವ ತ್ರಿಭಾಷಾ ಸೂತ್ರವನ್ನಾದರೂ ಅಳವಡಿಸಿಕೊಳ್ಳದಿರು
ವುದು ದುರದೃಷ್ಟಕರ’ ಎಂದು ಬಳಿಗಾರ್ ಅವರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಎಲ್ಲ ಬ್ಯಾಂಕುಗಳಲ್ಲಿಯೂ ಕನ್ನಡದಲ್ಲಿಯೇ ವ್ಯವಹಾರ ನಡೆಸಲು ಸ್ಪಷ್ಟವಾದ ನಿರ್ದೇಶನ ನೀಡಬೇಕು. ಕನ್ನಡಕ್ಕೆ ಅಪಮಾನ ಮಾಡಿದವರ ಮೇಲೆ ಶಿಶ್ತುಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.