ADVERTISEMENT

ಕೋವಿಡ್–19 | ವೈದ್ಯರು, ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 4:01 IST
Last Updated 31 ಮಾರ್ಚ್ 2020, 4:01 IST
   

ಬೆಂಗಳೂರು: ರಾಜ್ಯದಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಸ್ಪತ್ರೆಗಳಲ್ಲಿ ದಿನದ 24 ಗಂಟೆ ಪಾಳಿಯಲ್ಲಿ ಕೆಲಸ ಮಾಡಲು ಹೆಚ್ಚು ವೈದ್ಯಕೀಯ ಸಿಬ್ಬಂದಿ ಅಗತ್ಯವಿದ್ದು, ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಡಿ ದರ್ಜೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮಾತ್ರ ಈ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದ 18 ಜಿಲ್ಲೆಗಳ ಪೈಕಿ, ಪ್ರತಿ ಜಿಲ್ಲೆಗೆ 45 ಜನರಂತೆ ಒಟ್ಟು 810 ಸಿಬ್ಬಂದಿಯನ್ನು ತೆಗೆದುಕೊಳ್ಳಲಾಗುತ್ತದೆ. ವೈದ್ಯರಿಗೆ ಪ್ರತಿ ತಿಂಗಳಿಗೆ ₹60 ಸಾವಿರ, ಶುಶ್ರೂಷಕರಿಗೆ ₹20 ಸಾವಿರ, ಪ್ರಯೋಗಶಾಲಾ ತಂತ್ರಜ್ಞರಿಗೆ ₹15 ಸಾವಿರ, ಡಿ ದರ್ಜೆ ನೌಕರರಿಗೆ ₹12 ಸಾವಿರ ವೇತನ ನಿಗದಿ ಮಾಡಲಾಗಿದೆ.

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲೂ ಅರ್ಜಿ ಆಹ್ವಾನ:ಇದೇ ಉದ್ದೇಶಕ್ಕೆ ಬಿಬಿಎಂಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ವೈದ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಈ ಪ್ರಕ್ರಿಯೆ ಮುಗಿಸಲಾಗುತ್ತದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.