ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ವಕೀಲರ ಕಚೇರಿಗೆ ನುಗ್ಗಿ ದಾಖಲೆಗಳನ್ನು ಕಳ್ಳತನ ಮಾಡಿದ್ದ ಆರೋಪದ ಮೇರೆಗೆ ಆರು ಮಂದಿಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ನೀಡಿದ ದೂರು ಆಧರಿಸಿ ಮುರಳೀಧರ್ ಕೊಟ್ಯಾನ್, ಅರುಣ್‌ಕುಮಾರ್ ಕೊಟ್ಯಾನ್, ಎಂ.ಸಂದೇಶ, ರವೀಂದ್ರ ಡಿ. ಕುಂದರ್, ಇಂದುಮತಿ ಹಾಗೂ ಕಾಜಲ್ ಭಾಟಿಯಾ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಗುಂಪು ಕಟ್ಟಿಕೊಂಡು ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ, ಅಲ್ಲಿದ್ದ ದಾಖಲೆಗಳು ಮತ್ತು ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.