ADVERTISEMENT

ದೊಡ್ಡಬಿದರಕಲ್ಲು ವಾರ್ಡ್ ಅಭಿವೃದ್ಧಿಗೆ ಯೋಜನೆ: ಶಾಸಕ ಎಸ್.ಟಿ ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 16:09 IST
Last Updated 18 ಅಕ್ಟೋಬರ್ 2025, 16:09 IST
ಅಂದ್ರಹಳ್ಳಿಯಲ್ಲಿ ಒಳಚರಂಡಿ, ಡಾಂಬರೀಕರಣ, ಚರಂಡಿ ಕಾಮಗಾರಿಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.  
ಅಂದ್ರಹಳ್ಳಿಯಲ್ಲಿ ಒಳಚರಂಡಿ, ಡಾಂಬರೀಕರಣ, ಚರಂಡಿ ಕಾಮಗಾರಿಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.     

ರಾಜರಾಜೇಶ್ವರಿ ನಗರ: ದೊಡ್ಡಬಿದರಕಲ್ಲು ವಾರ್ಡ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು

ಅಂದ್ರಹಳ್ಳಿಯಲ್ಲಿ ಮತ್ತು ಸುತ್ತಮುತ್ತಲ ಬಡಾವಣೆಗಳಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ ಕೈಗೊಂಡಿರುವ ಯುಜಿಡಿ (ಒಳಚರಂಡಿ ಕಾಮಗಾರಿ), ಚರಂಡಿ, ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಸ್ತೆ, ಬೀದಿ ದೀಪ ಅಳವಡಿಕೆ, ಕಾವೇರಿ ನೀರು ಪೂರೈಕೆ ಸೇರಿ ವಾರ್ಡ್‌ನಲ್ಲಿ ಮೂಲಸೌಕರ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ರಸ್ತೆ ಅಭಿವೃದ್ಧಿಗೆ ಕಾರ್ಯಾದೇಶವಾಗಿದೆ. ಅಂದ್ರಹಳ್ಳಿ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ADVERTISEMENT

ಕ್ಷೇತ್ರದ ವಾರ್ಡ್ ಪುನರ್ ವಿಂಗಡಣೆ ವೇಳೆ ನಾಗರಿಕರ ಒತ್ತಾಸೆಯಂತೆ ಅಂದ್ರಹಳ್ಳಿ ವಾರ್ಡ್ ರಚಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು. 

ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಜಿಬಿಎ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.