ADVERTISEMENT

ದೊಡ್ಡಜಾಲ ಗ್ರಾ.ಪಂ: ನಾಗರಾಜು ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 15:58 IST
Last Updated 12 ಡಿಸೆಂಬರ್ 2025, 15:58 IST
ದೊಡ್ಡಜಾಲ ಗ್ರಾ.ಪಂ ಅಧ್ಯಕ್ಷ ನಾಗರಾಜು.ಎ ಅವರ ಭಾವಚಿತ್ರ
ದೊಡ್ಡಜಾಲ ಗ್ರಾ.ಪಂ ಅಧ್ಯಕ್ಷ ನಾಗರಾಜು.ಎ ಅವರ ಭಾವಚಿತ್ರ   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ದೊಡ್ಡಜಾಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ನಾಗರಾಜು.ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆರ್‌.ಬೈರೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಶುಕ್ರವಾರ ಚುನಾವಣಾ ಪ್ರಕ್ರಿಯೆ ನಡೆಯಿತು. 14 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ನಾಗರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.

‘ಕಂದಾಯ ಸಚಿವ ಕೃಷ್ಣಬೈರೇಗೌಡರ ಸಲಹೆ ಮತ್ತು ಮಾರ್ಗದರ್ಶನದ ಮೇರೆಗೆ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದು ನಾಗರಾಜು ತಿಳಿಸಿದರು.

ADVERTISEMENT

ಮಾಜಿ ಅಧ್ಯಕ್ಷರಾದ ಎನ್.ಕೆ.ಮಹೇಶ್‌ಕುಮಾರ್‌, ಹಂಸವೇಣಿ ಮಂಜುನಾಥ್‌, ಸದಸ್ಯರಾದ ಎಂ.ಚೇತನ್‌, ಹರಿಪ್ರಕಾಶ್‌, ಪ್ರಕಾಶ್‌, ನರಸಿಂಹಯ್ಯ, ಸೌಭಾಗ್ಯಮ್ಮ, ರತ್ನಮ್ಮ, ಮಾಲಾ, ಶ್ರುತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.