ADVERTISEMENT

ನಾಯಿಗಳ ರಕ್ಷಣೆಗೆ ಪ್ರತ್ಯೇಕ ವ್ಯವಸ್ಥೆ: ಯು.ಟಿ.ಖಾದರ್‌

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 16:25 IST
Last Updated 29 ಆಗಸ್ಟ್ 2025, 16:25 IST
ಯು.ಟಿ.ಖಾದರ್‌
ಯು.ಟಿ.ಖಾದರ್‌   

ಬೆಂಗಳೂರು: ವಿಧಾನಸೌಧದ ಆವರಣದಲ್ಲಿರುವ ನಾಯಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರಿಂದ ಅನುಮತಿ ಸಿಕ್ಕಿದರೆ ನಾಯಿಗಳ ಪ್ರತ್ಯೇಕ ನಿರ್ವಹಣೆಗೆ ವ್ಯವಸ್ಥೆ ಮಾಡಲು ತೀರ್ಮಾನಿಸುತ್ತೇವೆ ಎಂದು ಯು.ಟಿ.ಖಾದರ್‌ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ 53 ನಾಯಿಗಳಿವೆ. ಇವುಗಳು ವಿಧಾನಸೌಧದ ಒಳಗೆ ಬಾರದಂತೆ ತಡೆಯಲು ಗೇಟ್‌ ವ್ಯವಸ್ಥೆ ಇಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ಶಾಸಕರು ಬೆಳಗ್ಗಿನ ವೇಳೆ ವಾಕಿಂಗ್‌ ಮಾಡಲು ಮತ್ತು ಸಾರ್ವಜನಿಕರಿಗೆ ಈ ನಾಯಿಗಳಿಂದ ತೊಂದರೆ ಆಗುತ್ತಿದೆ. ಆದ್ದರಿಂದ ನಾಯಿಗಳ ರಕ್ಷಣೆಗೆ ಶೆಡ್‌ ನಿರ್ಮಾಣ ಮಾಡುವ ಆಲೋಚನೆ ಇದೆ. ಅಲ್ಲದೇ, ಎನ್‌ಜಿಒಗಳ ಮೂಲಕ ಸಾಕುವ ವ್ಯವಸ್ಥೆ ಮಾಡುವ ವಿಚಾರವೂ ಚರ್ಚೆಯಾಗಿದೆ. ಈ ಕುರಿತ ಎಲ್ಲ ಮಾಹಿತಿಯನ್ನು ಸರ್ಕಾರಕ್ಕೆ ನೀಡಿದ್ದೇವೆ. ಸರ್ಕಾರ ಒಪ್ಪಿಗೆ ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಾದರ್ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.