ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಗೌರವಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕುಲಪತಿ ನೇಮಿಸಲು ಯಾವುದೇ ರೀತಿ ವಿಳಂಬ ಮಾಡುವುದರಿಂದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶ್ರೀಮಂತ ಇತಿಹಾಸ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ಇಂತಹ ವಿಶ್ವವಿದ್ಯಾಲಯದಲ್ಲಿ ಕುಲಪತಿ ನೇಮಕಾತಿ ಸೃಷ್ಟಿಸಿರುವ ಗೊಂದಲ ಗಂಭೀರ ವಿಷಯವಾಗಿದೆ. ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ವಿಶ್ವವಿದ್ಯಾಲಯದಲ್ಲಿ ಆಡಳಿತವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.