ಪೀಣ್ಯ ದಾಸರಹಳ್ಳಿ: ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಸೋಲದೇವನಹಳ್ಳಿಯ ಪೊಲೀಸ್ ಅಧಿಕಾರಿಗಳು ಠಾಣಾ ವ್ಯಾಪ್ತಿಯ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು.
ಇನ್‌ಸ್ಟೆಕ್ಟರ್ ಕೆ.ಕೆ.ರಘು ಮತ್ತು ಪೊಲೀಸ್ ಅಧಿಕಾರಿಗಳ ತಂಡದವರು ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿ, ಗಣಪತಿ ನಗರ ಮತ್ತು ಆತ್ಮೀಯ ಗೆಳೆಯರ ಬಳಗದವರು ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ ಮಾಹಿತಿಗಳನ್ನು ಪೊಲೀಸರ ಬಳಿ ಹಂಚಿಕೊಳ್ಳಬಹುದು’ ಎಂದು ನಿವಾಸಿಗಳಿಗೆ ವಿವರಿಸಿದರು.
‘ಜನರೊಂದಿಗೆ ಸಮನ್ವಯ ಸಾಧಿಸಲು ಉತ್ತಮ ಕಾರ್ಯಕ್ರಮವಾಗಿದೆ. ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಭಿಪ್ರಾಯವನ್ನು ಉತ್ತಮಗೊಳಿಸಲು ಈ ಕಾರ್ಯಕ್ರಮ ಅನುಕೂಲವಾಗಿದೆ’ ಎಂದು ಮಾಧ್ಯಮದವರಿಗೆ ತಿಳಿಸಿದರು. ‘ಜನ ಸಾಮಾನ್ಯರು ಕಷ್ಟದ ಸಮಯದಲ್ಲಿ ಬಳಸಬಹುದಾದ ತುರ್ತು ಕರೆಗಳ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.