ADVERTISEMENT

ಬೆಂಗಳೂರು ಮೆಟ್ರೊ ರೈಲಿಗೆ ಫೀಡರ್ ಸೇವೆಯಾಗಿ ಡಬಲ್ ಡೆಕ್ಕರ್ ಬಸ್, ಕೇಬಲ್ ಕಾರ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 19:46 IST
Last Updated 5 ಜನವರಿ 2023, 19:46 IST
   

ಬೆಂಗಳೂರು: ಮೆಟ್ರೊ ರೈಲಿಗೆ ಫೀಡರ್ ಸೇವೆಯಾಗಿ ಸಮೂಹ ಸಾರಿಗೆ ಉತ್ತೇಜಿಸಲು ಡಬಲ್ ಡೆಕ್ಕರ್ ಬಸ್, ಕೇಬಲ್ ಕಾರ್, ಪಾಡ್‌ ಟ್ಯಾಕ್ಸಿ ಪರಿಚಯಿಸುವ ಬಗ್ಗೆ ಆಲೋಚನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಯೋಜನೆಗಳ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲು ತಜ್ಞರನ್ನು ನಿಯೋಜನೆ ಮಾಡಲು ತೀರ್ಮಾನಿಸಲಾಯಿತು. ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾಧ್ಯವಿರುವ ಕಡೆಗಳಲ್ಲಿ ಫ್ಲೈಓವರ್‌ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ’ ಎಂದರು.

ಪೀಣ್ಯ ಮೇಲ್ಸೇತುವೆ ಶೀಘ್ರ ದುರಸ್ತಿ

ADVERTISEMENT

ತುಮಕೂರು ರಸ್ತೆ ಪೀಣ್ಯ ಬಳಿಯ ಶಿವಕುಮಾರಸ್ವಾಮಿ ಮೇಲ್ಸೇತುವೆ ದುರಸ್ತಿ ಕಾರ್ಯವನ್ನು ಆದಷ್ಟು ಬೇಗ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ನಿರ್ದಿಷ್ಟ ವಿನ್ಯಾಸ ರೂಪಿಸಿ ಅದಕ್ಕೆ ಅನುಗುಣವಾಗಿ ಕೂಡಲೇ ಕಾಮಗಾರಿ ಆರಂಭಿಸಲು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅದರಂತೆ ಕಾಮಗಾರಿ ಪೂರ್ಣಗೊಳಿಸಿ ಶೀಘ್ರವೇ ಭಾರಿ ವಾಹನಗಳ ಸಂಚಾರ ಆರಂಭಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.