ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಡಾ. ರವಿಶಂಕರ್ ಜೆ ರವರಿಗೆ ಆಡಳಿತಗಾರರಾದ ತುಷಾರ್ ಗಿರಿ ನಾಥ್ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಭಿನಂದನೆ ಸಲ್ಲಿಸಿದರು.
BBMP X
ಬೆಂಗಳೂರು: ಡಾ.ಜೆ.ರವಿಶಂಕರ್ ಅವರನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಬಿಎಂಆರ್‌ಸಿ ಎಲ್‌ನ ವ್ಯವಸ್ಥಾಪಕ ಹುದ್ದೆಯನ್ನು ಹೆಚ್ಚುವರಿಯಾಗಿ ಹೊಂದಿದ್ದ ಮಹೇಶ್ವರ್ ರಾವ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಿ,ಕೃಷಿ ಇಲಾಖೆ ಕಾರ್ಯದರ್ಶಿಯಾಗಿದ್ದ ರವಿಶಂಕರ್ ಅವರನ್ನು ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.