ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಟಿ.ನವೀನ್ ಅವರನ್ನು ನೇಮಿಸಲಾಗಿದೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇವರು ಸಂಸ್ಥೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ.
ಸದ್ಯ ಪ್ರಭಾರ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಜಿಕಲ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ರವಿ ಅರ್ಜುನನ್ ಅವರು ಜನವರಿ 31ರಂದು ನಿವೃತ್ತಿ ಹೊಂದಿದ್ದಾರೆ. ತೆರವಾದ ಈ ಸ್ಥಾನಕ್ಕೆ ಇಲಾಖೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯುಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.