ADVERTISEMENT

ಡಾ.ರಾಜ್‌ಕುಮಾರ್ ಖತ್ರಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 19 ಮೇ 2020, 20:25 IST
Last Updated 19 ಮೇ 2020, 20:25 IST

ಬೆಂಗಳೂರು: ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್‌ ಎತ್ತಂಗಡಿಯಿಂದ ಚರ್ಚೆಗೆ ಗ್ರಾಸವಾಗಿದ್ದ ಕಾರ್ಮಿಕ ಇಲಾಖೆಗೆ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿ ಅವರನ್ನು ವರ್ಗಾಯಿಸಲಾಗಿದೆ.

ಮತ್ತೊಬ್ಬ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರನ್ನು ಉನ್ನತಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಅಂಜುಮ್ ಪರ್ವೇಜ್‌ ಅವರನ್ನು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜೆ.ರವಿಶಂಕರ್‌ ಅವರಿಗೆ ನಗರಾಭಿವೃದ್ಧಿ ಇಲಾಖೆ (ಯುಡಿ ಮತ್ತು ಮುನ್ಸಿಪಾಲಿಟಿ) ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ನ್ಯಾಯಾಧೀಶರ ವರ್ಗಾವಣೆ

ADVERTISEMENT

ಬೆಂಗಳೂರು: ಹನ್ನೊಂದು ಮಂದಿ ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಹಾಗೂ 5 ಮಂದಿ ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಅವರು ಮೇ 18ರಂದು ಅಧಿಸೂಚನೆ ಹೊರಡಿಸಿದ್ದಾರೆ.

ಅವ್ಯವಸ್ಥೆ ಸರಿಪಡಿಸಿ

ಬೆಂಗಳೂರು: ದೆಹಲಿಯಿಂದ ಬಂದವರನ್ನು ನಾಗರಭಾವಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆ ಹಾಸ್ಟೆಲ್‌ನಲ್ಲಿಕ್ವಾರಂಟೈನ್ ಮಾಡಲಾಗುತ್ತಿದ್ದು, ಅಲ್ಲಿ ಇರುವಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.